ವಿಮಾನ ನಿಲ್ದಾಣ, ಕಾರ್ಯಕ್ರಮಕ್ಕೆ ಪೆಂಡಾಲ್ ರೆಡಿ, ನಿಲ್ದಾಣದೊಳಗೆ ಹೈ ಸೆಕ್ಯೂರಿಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 FEBRURARY 2023

SHIMOGA : ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ದೊಡ್ಡ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆ ಏರ್ ಪೋರ್ಟ್ ಆವರಣದಲ್ಲಿ ಬೃಹತ್ ಪೆಂಡಾಲ್ (Pendal) ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಭಾಗವಹಿಸುತ್ತಿರುವ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Shimoga-Airport-Inauguration-Preparation

ಪೆಂಡಾಲ್ ರೆಡಿ

ವಿಮಾನ ನಿಲ್ದಾಣದ ಆವರಣದಲ್ಲಿ ಬೃಹತ್ ಪೆಂಡಾಲ್ (Pendal) ನಿರ್ಮಿಸಲಾಗಿದೆ. ಸುಮಾರು ಒಂದು ಲಕ್ಷ ಜನರು ಕೂರಲು ಕುರ್ಚಿಗಳನ್ನು ಹಾಕಲಾಗಿದೆ. ವಿಮಾನ ನಿಲ್ದಾಣದ ಗೇಟ್ ಒಳಗೆ ಪ್ರವೇಶ ಪಡೆಯುತ್ತಿದ್ದಂತೆ ಬಲ ಭಾಗದಲ್ಲಿ ಕಾರ್ಯಕ್ರಮದ ಸ್ಥಳವಿದೆ.

ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತದೆ. ಇದಕ್ಕಾಗಿ ಮೆಟಲ್ ಡಿಟೆಕ್ಟರ್ ಗಳನ್ನು ಅಳವಡಿಸಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.

Shivamogga Airport Inauguration Programme

ಊಟು, ತಿಂಡಿಗೆ ವ್ಯವಸ್ಥೆ

ಕಾರ್ಯಕ್ರಮಕ್ಕೆ ಬರುವ ದೊಡ್ಡ ಸಂಖ್ಯೆಯ ಜನರಿಗೆ ಊಟ, ತಿಂಡಿಗೆ ವಿಮಾನ ನಿಲ್ದಾಣದ ಆವರಣದ ಹೊರಗೆ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದ ಗೇಟ್ ಮುಂಭಾಗ ಮತ್ತು ಮಂಡೇನಕೊಪ್ಪ ಬಳಿ ತೋಟವೊಂದರಲ್ಲಿ ಬೃಹತ ಪೆಂಡಾಲ್ ಹಾಕಲಾಗಿದೆ.

ಪಾರ್ಕಿಂಗ್ ಸ್ಥಳ ನಿಯೋಜನೆ

ಶಿವಮೊಗ್ಗೆ ಮತ್ತು ಲಕ್ಕಿನಕೊಪ್ಪ ಕಡೆಯಿಂದ ಬರುವ ವಾಹನಗಳಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಬಸ್ಸುಗಳು, ಕಾರುಗಳು ಮತ್ತು ಇತರೆ ವಾಹನಗಳಿಗೆ ಸ್ಥಳವಾಕಾಶ ಕಲ್ಪಿಸಲಾಗಿದೆ. ರಸ್ತೆ ಪಕ್ಕದ ತೋಟಗಳು, ಖಾಲಿ ಜಾಗಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇದೆ.

Shimoga Airport Security

ಬಿಗಿ ಭದ್ರತೆ

ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯಾತಿಗಣ್ಯರು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಪೊಲೀಸರು ಆಗಮಿಸಿದ್ದಾರೆ. ಇನ್ನು, ಬಾಂಬ್ ಸ್ಕ್ವಾಡ್, ಪ್ರಧಾನಿ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಎಸ್.ಪಿ.ಜಿ ತಂಡ ಪ್ರತ್ಯೇಕವಾಗಿ ಭದ್ರತೆ ವಹಿಸಿಕೊಂಡಿವೆ.

ಇದನ್ನೂ ಓದಿ – ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆ, ನೆಮ್ಮದಿಯ ನಿಟ್ಟುಸಿರು ಬಿಟ್ಟ ವಾಹನ ಸವಾರರು, ಕಾರಣವೇನು?

JNNCE College VTU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 26, 2023

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment