ಶಂಕುಸ್ಥಾಪನೆಗೆ ಬಂದಿದ್ದ ಎಂಎಲ್ಎ ಜೊತೆ ಗ್ರಾಮಸ್ಥರ ವಾಗ್ವಾದ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 18 NOVEMBER 2022

SHIMOGA | ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ತೆರಳಿದ್ದ ಶಾಸಕ ಕೆ.ಬಿ.ಆಶೋಕ್ ನಾಯ್ಕ್ ಅವರಿಗೆ ಸ್ಥಳೀಯರು ಘೆರಾವ್ (altercation) ಹಾಕಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Atiyas Motors

ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಘಟನೆ ಸಂಭವಿಸಿದೆ. ಶಾಸಕ ಅಶೋಕ್ ನಾಯ್ಕ್ ಅವರು, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಗ್ರಾಮಕ್ಕೆ ಆಗಮಿಸಿದ್ದರು. ಕಾಂಗ್ರೆಸ್ ಮುಖಂಡ ನಾಗರಾಜ್ ನೇತೃತ್ವದಲ್ಲಿ ಸ್ಥಳೀಯರು ಶಾಸಕರ ವಿರುದ್ಧ ಘೋಷಣೆ ಕೂಗಿ, ಘೆರವ್ ಹಾಕಿದ್ದಾರೆ.

(altercation)

ಘೋಷಣೆ ಕೂಗಿದವರ ಬೇಡಿಕೆ ಏನು?

ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರು ಹಕ್ಕುಪತ್ರ ಕೊಡಿಸುವಲ್ಲಿ ವಿಫಲವಾಗಿದ್ದಾರೆ. ಐದು ವರ್ಷದಿಂದ ಭರವಸೆ ನೀಡುತ್ತ ಬಂದಿದ್ದಾರೆ. ಆದರೆ ಈತನಕ ಹಕ್ಕುಪತ್ರ ಕೊಡಿಸಿಲ್ಲ. ಇನ್ನು, ಶಿವಮೊಗ್ಗ – ಚಿತ್ರದುರ್ಗ ಹೆದ್ದಾರಿ ಕಾಮಗಾರಿಗೆ ಜಮೀನು, ಮನೆ ಕಳೆದುಕೊಂಡವರಿಗೆ ಹೆಚ್ಚುವರಿ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಘೋಷಣೆ ಕೂಗಿದರು. (altercation) 

ಕ್ಲಿಕ್ ಮಾಡಿ ಇದನ್ನೂ ಓದಿ ಮೆಸೇಜ್ ತಂದ ಸಂಕಷ್ಟ, ದೂರು ದಾಖಲಿಸಿ, ತಲೆ ಮೇಲೆ ಕೈ ಹೊತ್ತು ಕುಳಿತ ರೈತ

ವಾಗ್ವಾದ, ಶಾಸಕರ ಸ್ಪಷ್ಟನೆ

ಈ ಮಧ್ಯೆ ಪ್ರತಿಭಟನೆ ನಿರತರು ಮತ್ತು ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರ ಮಧ್ಯೆ ವಾಗ್ವಾದ ನಡೆದಿದೆ. ಈ ಸಂದರ್ಭ ಮಾತನಾಡಿದ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರು, ಹಕ್ಕುಪತ್ರ ಕೊಡಿಸುವುದು ಮತ್ತು ಹೆಚ್ಚುವರಿ ಪರಿಹಾರದ ಹಣ ಕೊಡಿಸಲು ತಾವು ಬದ್ಧ. ಈ ವಿಚಾರವಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜನರ ಜೊತೆಗೆ ನಾನು ಇದ್ದೇನೆ. 30 ವರ್ಷದಿಂದ ವಿಫಲರಾಗಿರುವವರು ಎರಡು ದಿನದಲ್ಲಿ ಹಕ್ಕುಪತ್ರ ಕೊಡಿಸಿ ಎಂದು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. 94 ಸಿ, 94 ಡಿ ಅರ್ಜಿ ವಿಚಾರವಾಗಿ ಅರಿವಿಲ್ಲದವರ ಮುಂದಾಳತ್ವದಲ್ಲಿ ಹೋರಾಟ ಮಾಡಿದರೆ ಫಲಾನುಭವಿಗಳಿಗೆ ನ್ಯಾಯ ದೊರೆಯುವುದಿಲ್ಲ. ಜನರ ಸಮಸ್ಯೆ ಪರಿಹಾರಕ್ಕೆ ತಾವು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment