ಶಿವಮೊಗ್ಗ ಲೈವ್
ಶಿವಮೊಗ್ಗ: ಗಾಂಧಿ ಜಯಂತಿ ಹಿನ್ನೆಲೆ ಅಕ್ಟೋಬರ್ 2 ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಪಾಲಿಕೆ ತಿಳಿವಳಿಕೆ ಪತ್ರ ಹೊರಡಿಸಿದೆ.
ಸರ್ಕಾರದ ಅಧಿಸೂಚನೆಯಂತೆ ಅಕ್ಟೋಬರ್ 2ರಂದು ಮಾಂಸರಹಿತ ದಿನ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆ ಪಾಲಿಕೆ ವ್ಯಾಪ್ತಿಯಲ್ಲಿ ಅಂದು ಪ್ರಾಣಿವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಮಾಂಸ ಮಾರಾಟದ ಉದ್ದಿಮೆದಾರರು ತಮ್ಮ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿ, ವ್ಯಾಪಾರ ಸ್ಥಗಿತಗೊಳಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
