ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOLEHONNUR NEWS | 18 ನವೆಂಬರ್ 2021
ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ಸುಮಾರು ನೂರು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ತಾಲೂಕು ನಾಗತಿಬೆಳಗಲು ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಬೇಧಿ, ಜ್ವರ, ಹೊಟ್ಟೆನೋವು ಕಾಣಿಸಿಕೊಂಡಿದೆ.
ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ
ಬುಧವಾರ ಮಧ್ಯಾಹ್ನ ಊಟ ಸೇವಿಸಿದ್ದ ಹಲವರು ರಾತ್ರಿ ವೇಳೆಗೆ ಅಸ್ವಸ್ಥರಾಗಿದ್ದಾರೆ. ಕೂಡಲೆ ಹಲವರು ಹೊಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಕೆಲವರು ಭದ್ರಾವತಿ ಸಾರ್ವಜನಿಕ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರು ಖಾಸಗಿ ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ |
ಮದುವೆ ಮನೆಯಲ್ಲಿ ಊಟ ಮಾಡಿದವರು ಅಸ್ವಸ್ಥ ಪ್ರಕರಣ, ಇಲ್ಲಿದೆ ಈವರೆಗಿನ 5 ಬೆಳವಣಿಗೆ
ಜನರು ಅಸ್ವಸ್ಥರಾಗಲು ಕಾರಣವೇನು ಅನ್ನುವುದು ನಿಖರವಾಗಿ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಊಟ ಸ್ಯಾಂಪಲ್ ಸಂಗ್ರಹ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ |
150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422