SHIVAMOGGA LIVE NEWS | 7 JANUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ವರದಿ ಸಲ್ಲಿಸಲು ವಿಳಂಬ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ವಿಶೇಷ ನ್ಯಾಯಾಲಯದ ರಿಜಿಸ್ಟ್ರಾರ್ ಜಿಲ್ಲಾ ಪೊಲೀಸ್ ಇಲಾಖೆಗೆ ಪತ್ರ ಕಳುಹಿಸಿದ್ದಾರೆ.
ಯಾವ ವರದಿ? ಏನಿದು ಪ್ರಕರಣ?
ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿತ್ತು. ಕೆರೆಯಿಂದ ಅಕ್ರಮವಾಗಿ ಮಣ್ಣು ತೆಗೆದು ಖಾಸಗಿ ಲೇಔಟ್‌ಗಳಿಗೆ ಸಾಗಿಸಲಾಗಿದೆ. 500 ಲೋಡ್ ಮಣ್ಣು ತೆಗೆಯಲು ಅನುಮತಿ ಪಡೆದು 15,004 ಲೋಡ್ ಮಣ್ಣು ಸಾಗಿಸಲಿದೆ. ಇದರಿಂದ ಸರ್ಕಾರಕ್ಕೆ 71.45 ಲಕ್ಷ ರೂ. ನಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಲಯ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ನ್ಯಾಯಾಲಯ ಸೂಚಿಸಿತ್ತು.
ಬಂಧನಕ್ಕೆ ವಾರಂಟ್ ಜಾರಿ
ಆ.13ರಂದು ಪತ್ರಿಕೆಯಲ್ಲಿ ಆರೋಪ ಮಾಡಲಾಗಿದೆ. ಇದರ ಕುರಿತು ವಿಸ್ತೃತ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಿದ್ದರೂ ಜಿಲ್ಲಾ ಪಂಚಾಯಿತಿ ಸಿಇಒ ನ್ಯಾಯಾಲಯಕ್ಕೆ ವರದಿ ಸಲ್ಲಿಸಿಲ್ಲ. ಆದ್ದರಿಂದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ದಸ್ತಗಿರಿ ಮಾಡುವಂತೆ ನ್ಯಾಯಾಲಯ ಆದೇಶಿಸಿದ. ಫೆ.16ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು. 25 ಸಾವಿರ ರೂ. ಮುಚ್ಚಳಿಕೆ ಬರೆದು ಕೊಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ದಿಢೀರ್ ರದ್ದು, ಟರ್ಮಿನಲ್‌ನಲ್ಲೇ ಪ್ರಯಾಣಿಕರ ಪ್ರತಿಭಟನೆ, ಅಧಿಕಾರಿಗಳಿಗೆ ತರಾಟೆ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






