ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 ಮಾರ್ಚ್ 2022
ಮೇಯಲು ಹೋಗಿದ್ದ ಹಸುವಿನ ಕಾಲನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಮಚ್ಚಿನಿಂದ ಹಲ್ಲೆ ನಡೆಸಿ ಹಸುವಿನ ಕಾಲು ಕತ್ತರಿಸಲಾಗಿದೆ.
ಶಿವಮೊಗ್ಗ ತಾಲೂಕು ಚೋರಡಿ ಸಮೀಪದ ಹೊರಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ ಎಂಬುವವರಿಗೆ ಸೇರಿದ ಹಸುವಿನ ಕಾಲು ಕತ್ತರಿಸಲಾಗಿದೆ.
ಎಲ್ಲಾ ಹಸುಗಳನ್ನು ಮೇವಿಗಾಗಿ ಕಾಡಿಗೆ ಬಿಡಲಾಗಿತ್ತು. ಸಂಜೆ ಹೊತ್ತಿಗೆ ಎಲ್ಲಾ ಹಸುಗಳು ಮನೆಗೆ ಹಿಂತಿರುಗಿವೆ. ಒಂದು ಹಸು ಮಾತ್ರ ಮರಳಿರಲಿಲ್ಲ. ಮರುದಿನ ಬೆಳಗ್ಗೆ ಖಾಲಿ ಹೊಲದಲ್ಲಿ ಹಸು ಇರುವುದು ಗೊತ್ತಾಗಿದೆ.
ಸಮೀಪಕ್ಕೆ ಹೋಗಿ ನೋಡಿದಾಗ ಹಸುವಿನ ಕಾಲಿಗೆ ಮಚ್ಚಿನಿಂದ ಹೊಡೆದು ಕತ್ತರಿಸಿರುವುದು ಕಂಡು ಬಂದಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





