ಶಿವಮೊಗ್ಗ ಲೈವ್.ಕಾಂ | SHIMOGA | 20 ನವೆಂಬರ್ 2019
ಆಯನೂರು ಮತ್ತು ಹೊಳೆಹೊನ್ನೂರು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಕುರಿತು ವಿಧಾನಸಭೆಯಲ್ಲಿ ಚರ್ಚೆಯಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಹೇಳಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ಅಶೋಕ ನಾಯ್ಕ, ಬಹುವರ್ಷದ ಹಿಂದೆಯೆ ಆಯನೂರು ಪಟ್ಟಣ ಪಂಚಾಯಿತಿ ಆಗಬೇಕಿತ್ತು. ಈಗ ಆಯನುರು ಮತ್ತು ಕೋಹಳ್ಳಿ ಸೇರಿ ಪಟ್ಟಣ ಪಂಚಾಯಿತಿ ಆಗುವ ಅರ್ಹತೆ ಹೊಂದಿವೆ ಎಂದರು.
ಹೊಳೆಹೊನ್ನೂರಿಗು ಇದೆ ಅರ್ಹತೆ
15 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಹೊಂದಿರುವ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಅವಕಾಶವಿದೆ. ಆಯನೂರು ಮತ್ತು ಹೊಳೆಹೊನ್ನೂರು ಗ್ರಾಮ ಪಂಚಾತಿಯಿತಿಗೆ ಈ ಅಹರ್ತೆ ಇದೆ. ಕೂಡಲೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿಗೆ ಸಲ್ಲಿಸುವಂತೆ ಸಲಹೆ ನೀಡಿದರು.
ಪ್ರವಾಸಿ ಮಂದಿರ, ಬಸ್ ನಿಲ್ದಾಣ ಉನ್ನತೀಕರಣ
ಪ್ರವಾಸಿ ಮಂದಿರ ನಿರ್ಮಾಣಕ್ಕೆ ಎರಡು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಆದರೆ ಕಾಮಗಾರಿ ವಿಳಂಬವಾಗಿದೆ. ಇನ್ನು, ಬಸ್ ನಿಲ್ದಾಣದ ಉನ್ನತೀಕರಣಕ್ಕೆ 1 ಕೋಟಿ ರೂ. ಅನದಾನ ಬಿಡುಗಡೆ ಮಾಡಲಾಗಿದೆ. ಕೆಪಿಎಸ್ ಶಾಲೆ ಪ್ರಸ್ತಾವನೆ ಇದೆ ಎಂದರು.
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಗೀತಾ ಜಯಶೇಖರ್, ಕೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ತಾ.ಪಂ ಉಪಾಧ್ಯಕ್ಷೆ ನಿರ್ಮಲಾ ಮೋಹನ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]