ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
AYANURU, 21 AUGUST 2024 : ಬೇಕರಿಯೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಸಿಲಿಂಡರ್‌ಗಳು (cylinder) ಸ್ಪೋಟಗೊಂಡಿವೆ. ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಘಟನೆ ಸಂಭವಿಸಿದೆ.
ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್‌ಗಳು ಸ್ಪೋಟಗೊಂಡಿವೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೆ ಸ್ಥಳದಿಂದ ಓಡಿ ಹೋಗಿದ್ದಾರೆ. ಬೇಕರಿ ಮುಂಭಾಗದಲ್ಲಿಯೇ ಪೆಟ್ರೋಲ್ ಬಂಕ್ ಇದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಇದೇ ಮೊದಲು ಸೇನೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ, ನಾಳೆಯಿಂದ ಆಯ್ಕೆ ಶುರು, ಹೇಗಿದೆ ಸಿದ್ಧತೆ?

