ಶಿವಮೊಗ್ಗ ಲೈವ್.ಕಾಂ | 1 ಜುಲೈ 2019
ಸಕ್ರೆಬೈಲು ಆನೆ ಬಿಡಾರದಲ್ಲಿ ಮರಿಯಾನೆ ಸಾವನ್ನಪ್ಪಿದೆ. ಕೆಲ ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮರಿ ಆನೆ, ರಕ್ತವಾಂತಿ ಮಾಡಿಕೊಳ್ಳುತ್ತಿತ್ತು. ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೆ, ಆನೆ ಸಾವನ್ನಪ್ಪಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಾರದ, ಮೃತ ಮರಿ ಆನೆ. ಕಳೆದ ವರ್ಷ ಹಾಸನದಲ್ಲಿ ಸೆರೆ ಹಿಡಿಯಲಾಗಿದ್ದ ಆನೆಯನ್ನು ಸಕ್ರೆಬೈಲು ಆನೆ ಬಿಡಾರದಲ್ಲಿ ಸಾಕಲಾಗುತ್ತಿತ್ತು.
‘ಆನೆಗೆ ಬಿಡಾರದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ, ಫಲಕಾರಿಯಾಗದೆ ಮೃತಪಟ್ಟಿದೆ. ಆನೆಯ ಅಂಗಾಂಗಗಳನ್ನು ಪರೀಕ್ಷೆಗೆ ಒಳಪಡಿಸಲು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ ಮತ್ತು ಕೇರಳದ ಪಶು ಕಾಲೇಜಿಗೆ ಕಳುಹಿಸಲಾಗುತ್ತದೆ. ಆ ಬಳಿಕವೇ ಆನೆಯ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ವನ್ಯಜೀವಿ ಡಿಎಫ್ಒ ಆಂಥೋಣಿ ಮರಿಯಪ್ಪ ತಿಳಿಸಿದ್ದಾರೆ.
ಮರಿಯಾನ ಸಾವಿನಿಂದಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸಂಖ್ಯೆ 26 ರಿಂದ 25ಕ್ಕೆ ಇಳಿಕೆಯಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]