SHIVAMOGGA LIVE NEWS | 20 JULY 2024
SHIMOGA : ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಗಾಜನೂರಿನ ಜಲಾಶಯದಲ್ಲಿ (Dam) ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಾಗಿನ ಅರ್ಪಿಸಲಾಯಿತು.
ಇದೇ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳ ಸುಮಾರು 80 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ತುಂಗಾ ಮೇಲ್ದಂಡೆ ಯೋಜನೆ ಮೂಲಕ ನೀರು ಒದಗಿಸಲಾಗುತ್ತಿದೆ. ಇದು ಈ ಭಾಗದ ಜನರ ಜೀವನದಿ. ಕಳೆದ ವರ್ಷ ಮಳೆ ಇಲ್ಲದೆ ಜನರು ತತ್ತರಿಸಿದ್ದರು. ಈ ವರ್ಷ ಉತ್ತಮ ಮಳೆಯಾಗುತ್ತಿದೆ. ರೈತರು ಒಳ್ಳೆ ರೀತಿಯಲ್ಲಿ ನೀರು ಬಳಕೆ ಮಾಡಿಕೊಂಡು ಉತ್ತಮ ಬೆಳೆ ಬೆಳೆಯುವಂತಾಗಲಿ ಎಂದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ತೀರ್ಥಹಳ್ಳಿಯಲ್ಲಿ ವಾಡಿಕೆಗಿಂತಲು ಕಡಿಮೆ ಮಳೆಯಾಗಿದೆ. ಇನ್ನಷ್ಟು ಮಳೆ ಬರಬೇಕಿದೆ. ತುಂಗಾ ಜಲಾಶಯದಲ್ಲಿ ಹೂಳು ತುಂಬಿದೆ. ಮೂರು ಇಲಾಖೆಗಳು ಸೇರಿ ಹೂಳೆತ್ತಬೇಕಿದೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಜಲಾಶಯದಲ್ಲಿ ಹೂಳೆತ್ತುವ ಕುರಿತು ಮೂರು ಬಾರಿ ಚರ್ಚೆ ಆಗಿದೆ. ಮೂರ್ನಾಲ್ಕು ಇಲಾಖೆಗಳು ಸೇರಿ ಈ ಕೆಲಸ ಮಾಡಬೇಕಿದೆ. ತುಂಗಾ ಜಲಾಶಯ ಈ ಭಾಗದ ಜನರ ಜೀವನಾಡಿಯಾಗಿದ್ದು, ಹೆಚ್ಚು ನೀರು ಸಂಗ್ರಹವಾಗಬೇಕಿದೆ. ಈಗಾಗಲೆ ಅಧಿಕಾರಿಗಳ ಸಭೆ ನಡೆಸಿದ್ದು, ಹೂಳೆತ್ತುವುದು ಅಸಾಧ್ಯ ಎಂದಿದ್ದಾರೆ. ಆದರೆ ಮತ್ತೆ ಈ ಬಗ್ಗೆ ಸಭೆ ಕರೆದು ಚರ್ಚೆ ಮಾಡಬೇಕಿದೆ. ಈ ಕಾರ್ಯಕ್ಕೆ ಹಣದ ಅವಶ್ಯಕತೆ ಇದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಪ್ರಮುಖರಾದ ಎಸ್.ದತ್ತಾತ್ರಿ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ ⇓
ಭದ್ರಾ ಡ್ಯಾಮ್‌ಗೆ ಭರಪೂರ ನೀರು, ಏರಿತು ತುಂಗಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು, ಎಷ್ಟಾಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200