ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

Published On : ಏಪ್ರಿಲ್ 7, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ತಾಲೂಕಿನ ಹಿಟ್ಟೂರು ಸರ್ಕಲ್ ಬಳಿ ಎರಡು ಬೈಕ್‌ಗಳ (bike) ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಗಾಯಗೊಂಡಿದ್ದಾರೆ. ಮಂಡಗಟ್ಟ ಗ್ರಾಮದ ನಿವಾಸಿ ಸಂತೋಷ್ ಎಂಬುವರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಆಯನೂರು-ಸವಳಂಗ ರಸ್ತೆಯಲ್ಲಿ ಸಂತೋಷ್ ಅವರು ತಮ್ಮ ಪಲ್ಸರ್ ಬೈಕಿನಲ್ಲಿ ಆಯನೂರು ಮಾರ್ಗವಾಗಿ ಹೊನ್ನಾಳಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಂತೋಷ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ.

ಇದನ್ನೂ ಓದಿ : ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಂತೋಷ್ ಅವರ ಬಲಗಾಲಿನ ಮಂಡಿ, ಹಿಮ್ಮಡಿ, ಎಡಗಾಲಿನ ತೊಡೆ ಹಾಗೂ ತಲೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ತಕ್ಷಣವೇ ಸ್ಥಳೀಯರು ಆಂಬುಲೆನ್ಸ್ ಮೂಲಕ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ಬೈಕ್‌ನಲ್ಲಿದ್ದ ಇಬ್ಬರಿಗೂ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 7, 2026

Leave a Comment