ಹೊಳಲೂರಿನಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್‌ ಡಿಕ್ಕಿ, ಸವಾರನಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಳಲೂರು ಸಮೀಪದ ಸನ್ಯಾಸಿ ಕೊಡಮಗ್ಗೆ ರಸ್ತೆಯಲ್ಲಿ ಘಟನೆ ನಡೆದಿದೆ.

ಭದ್ರಾವತಿಯ ಹುತ್ತಾ ಕಾಲೋನಿ ನಿವಾಸಿ ಜನಾರ್ದನ ಅಲಿಯಾಸ್ ಜನೂ (46) ಗಾಯಗೊಂಡವರು. ರಾತ್ರಿ ಕಾರ್ಯಕ್ರಮವೊಂದನ್ನು ಮುಗಿಸಿ ಬೈಕ್‌ನಲ್ಲಿ ಭದ್ರಾವತಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹೊಳಲೂರು ಗ್ರಾಮದ ಬಳಿ ಮುನ್ನೆಚ್ಚರಿಕೆ ಕೈಗೊಳ್ಳದೆ, ಸಿಗ್ನಲ್ ಲೈಟ್‌ ಹಾಕದೆ ರಸ್ತೆಯಲ್ಲಿ ಲಾರಿ ನಿಲ್ಲಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ACCIDENT-NEWS-GENERAL-IMAGE.

ಲಾರಿಗೆ ಬೈಕ್‌ ಡಿಕ್ಕಿಯಾಗಿ ಜನಾರ್ದನ ಅವರಿಗೆ ಗಂಭೀರ ಪಟ್ಟಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರ ಹೊಳಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.