ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 MAY 2024
KUMSI : ಒಂದು ಬೈಕ್ (BIKE) ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕನಕನಗರದ ಶಿವು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಅಂಬೇಡ್ಕರ್ ನಗರದ ಅಲ್ಲಾ ಬಕ್ಕಾಶ್ (19) ಮತ್ತು ಅಪ್ರಾಪ್ತನೊಬ್ಬನನ್ನು ವಶಕ್ಕೆ ಪಡೆರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 90 ಸಾವಿರ ರೂ. ಮೌಲ್ಯದ ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯವಾಗಲಿದೆ? ಇಲ್ಲಿ ಬಡಾವಣೆಗಳ ಲಿಸ್ಟ್
ಕುಂಸಿ ಠಾಣೆ ಇನ್ಸ್‌ಪೆಕ್ಟರ್ ಬಸವರಾಜ್, ಪಿಎಸ್‌ಐ ಶಾಂತರಾಜ್, ಸಿಬ್ಬಂದಿ ಪ್ರಕಾಶ್, ಶಿವಪ್ಪ, ಶಶಿಧರ, ರಾಜು ಕಾಂಬ್ಳೆ, ಬುರಾನ್, ಆದರ್ಶ, ವಿನಾಯಕ ಬಿ.ಟಿ, ಶಶಿಕುಮಾರ್, ಮಂಜುನಾಥ, ದಿನೇಶ್ ರಾವ್, ಜಯ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ಕಛೇರಿ ತಾಂತ್ರಿಕ ವಿಭಾಗದ ಸಿಬ್ಬಂದಿ ಗುರುರಾಜ್, ಇಂದ್ರೇಶ್, ಮತ್ತು ವಿಜಯ್ ಕುಮಾರ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






