ಒಂದು ಬೈಕ್‌ ಹುಡುಕ್ತಿದ್ದ ಪೊಲೀಸರಿಗೆ ಸಿಕ್ತು ಎರಡು ಬೈಕ್‌, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 MAY 2024

KUMSI : ಒಂದು ಬೈಕ್‌ (BIKE) ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕನಕನಗರದ ಶಿವು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಅಂಬೇಡ್ಕರ್‌ ನಗರದ ಅಲ್ಲಾ ಬಕ್ಕಾಶ್‌ (19) ಮತ್ತು ಅಪ್ರಾಪ್ತನೊಬ್ಬನನ್ನು ವಶಕ್ಕೆ ಪಡೆರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 90 ಸಾವಿರ ರೂ. ಮೌಲ್ಯದ ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯವಾಗಲಿದೆ?‌ ಇಲ್ಲಿ ಬಡಾವಣೆಗಳ ಲಿಸ್ಟ್

ಕುಂಸಿ ಠಾಣೆ ಇನ್ಸ್‌ಪೆಕ್ಟರ್‌ ಬಸವರಾಜ್‌, ಪಿಎಸ್‌ಐ ಶಾಂತರಾಜ್‌, ಸಿಬ್ಬಂದಿ ಪ್ರಕಾಶ್‌, ಶಿವಪ್ಪ, ಶಶಿಧರ, ರಾಜು ಕಾಂಬ್ಳೆ, ಬುರಾನ್, ಆದರ್ಶ, ವಿನಾಯಕ ಬಿ.ಟಿ, ಶಶಿಕುಮಾರ್, ಮಂಜುನಾಥ, ದಿನೇಶ್ ರಾವ್, ಜಯ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ಕಛೇರಿ ತಾಂತ್ರಿಕ ವಿಭಾಗದ ಸಿಬ್ಬಂದಿ ಗುರುರಾಜ್, ಇಂದ್ರೇಶ್, ಮತ್ತು ವಿಜಯ್ ಕುಮಾರ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. ‌

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment