ಹೊಳಲೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಕೃತ್ಯ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ತಾಲ್ಲೂಕಿನ ಹೊಳಲೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಲಾಗಿದೆ.

ಹೊಳಲೂರು ಗ್ರಾಮದ ಆಶ್ರಯ ಕಾಲೋನಿಯ ನಿವಾಸಿ ಉಮರ್ ಫಾರೂಕ್ ಎಂಬುವವರಿಗೆ ಸೇರಿದ ಬಜಾಜ್ ಪಲ್ಸರ್ ಎನ್-160 ಬೈಕ್ ಕಳ್ಳತನವಾಗಿದೆ. ಜುಲೈ 4ರಂದು ರಾತ್ರಿ 10 ಗಂಟೆಗೆ ಕೆಲಸ ಮುಗಿಸಿಕೊಂಡು ಬಂದು ಎಂದಿನಂತೆ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿದ್ದರು. ಮರುದಿನ ದಿನ ಬೆಳಿಗ್ಗೆ 7 ಗಂಟೆ ಸುಮಾರಿಗೆ ಗಮನಿಸಿದಾಗ ವಾಹನ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಳುವಾದ ಕಪ್ಪು ಬಣ್ಣದ ಬೈಕ್‌ನ ಅಂದಾಜು ಮೌಲ್ಯ ₹60 ಸಾವಿರ ಎಂದು ಅಂದಾಜಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ತಡವಾಗಿ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

crime name image