ಶಿವಮೊಗ್ಗ: ಮನೆ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿ ತಳ್ಳಿಕೊಂಡು ಹೋಗುತ್ತಿದ್ದಾಗ ಜನರು ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗದ ನಿದಿಗೆ ಗ್ರಾಮದ ಶರತ್ ಎಂಬುವವರ ಸ್ಪ್ಲೆಂಡರ್ ಪ್ಲಸ್ ಬೈಕ್ (Bike) ಕಳ್ಳತನ ಮಾಡಿಕೊಂಡು ಹೋಗುವಾಗ ಕಳ್ಳ ಸಿಕ್ಕಿಬಿದ್ದಿದ್ದಾನೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶರತ್ ತಮ್ಮ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಬೈಕನ್ನ ವ್ಯಕ್ತಿಯೊಬ್ಬ ಹೊರಗೆ ಕೊಂಡೊಯ್ದು ಸ್ವಲ್ಪ ದೂರದವರೆಗೆ ತಳ್ಳಿಕೊಂಡು ಹೋಗುತ್ತಿದ್ದ. ಶರತ್ ಅವರ ತಂದೆ ಇದನ್ನು ಗಮನಿಸಿ ಜೋರಾಗಿ ಜನರನ್ನು ಕೂಗಿದ್ದಾರೆ. ಕಳ್ಳನನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೈಕ್ ಕಳ್ಳತನಕ್ಕೆ ಯತ್ನಿಸಿದವನನ್ನು ರಂಗನಾಥ ಅಲಿಯಾಸ್ ಕಳ್ಳ ರಂಗ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಕ್ಬರ್ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್ ರಿಯಾಕ್ಷನ್, ಏನಂದ್ರು ಎಸ್‌ಪಿ?
Bike thief caught
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






