ಶಿವಮೊಗ್ಗದ ಮತ್ತೂರಿಗೆ ವಿಜಯೇಂದ್ರ ಭೇಟಿ, ಭಾನುಪ್ರಕಾಶ್‌ ಕುಟುಂಬಕ್ಕೆ ಸಾಂತ್ವನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JUNE 2024

SHIMOGA : ಹೃದಯಾಘಾತದಿಂದ ನಿಧನರಾದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ (President) ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದರು. ಮತ್ತೂರು ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ್ದ ವಿಜಯೇಂದ್ರ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದೆ ಬಿ.ವೈ.ವಿಜಯೇಂದ್ರ, ಹಿರಿಯರಾದ ಭಾನುಪ್ರಕಾಶ್ ಅವರ ಅಗಲಿಕೆ ಕಾರ್ಯಕರ್ತರಿಗೆ ದಿಗ್ಭ್ರಮೆ ಉಂಟು ಮಾಡಿದೆ. ಭಾನುಪ್ರಕಾಶ್ ಅವರ ಇಡೀ ಕುಟುಂಬವೇ ಸಂಘಕ್ಕಾಗಿ ದುಡಿದಿದೆ. ಯಾರಿಗೂ ನೋಯಿಸದೆ ಪರಿಶುದ್ಧ ರಾಜಕೀಯ ಮಾಡಿಕೊಂಡು ಬಂದವರು. ಭಾನುಪ್ರಕಾಶ್ ಅವರ ಸಾವು ಸಂಘಟನೆಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಪ್ರೇರಣೆ ನಮ್ಮ ಜೊತೆಗೆ ಇರಲಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣಾಂತರದಿಂದ ಬರಲು ಸಾಧ್ಯ ಆಗಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದ ಈವರೆಗಿನ ಟಾಪ್‌ 10 ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ – 18 ಜೂನ್‌ 2024

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment