ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 2 ಜುಲೈ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇನ್ಮುಂದೆ ಸೆಕ್ರಬೈಲಿಗೆ ಹೋದರೆ ಆನೆಗಳನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ತುಂಗಾ ನದಿ ಹಿನ್ನೀರಿನಲ್ಲಿ ದೋಣಿ (BOAT RIDE) ವಿಹಾರವನ್ನೂ ಮಾಡಬಹುದಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತುಂಗೆಯ ಹಿನ್ನೀರಿನಲ್ಲಿ ಬೋಟ್ ಸ್ಪೋರ್ಟ್ಸ್’ಗೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡಿದರು. ಒಂದು ಬೋಟ್, ಎರಡು ಕಯಾಕ್ ಬೋಟ್’ಗಳನ್ನು ಲೋಕಾರ್ಪಣೆ ಮಾಡಲಾಗಿದೆ.
ಸಂಸದರಿಂದ ದೋಣಿ ಸವಾರಿ
ದೋಣಿ ವಿಹಾರಕ್ಕೆ (BOAT RIDE) ಚಾಲನೆ ನೀಡಿದ ಬಳಿಕ ಸಂಸದ ಬಿ.ವೈ.ರಾಘವೇಂದ್ರ ಅವರು ತುಂಗಾ ನದಿ ಹಿನ್ನೀರಿನಲ್ಲಿ ದೋಣಿ ವಿಹಾರ ಮಾಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಇದ್ದರು.
ಬಿಡಾರಕ್ಕೆ ಪ್ರವಾಸಿಗರ ಹೆಚ್ಚಳ ನಿರೀಕ್ಷೆ
ಬೋಟ್ ಸ್ಪೋರ್ಟ್’ಗೆ ಚಾಲನೆ ಸಿಕ್ಕಿರುವುದರಿಂದ ಸಕ್ರೆಬೈಲು ಆನೆ ಬಿಡಾರ ಮತ್ತಷ್ಟು ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಬಿಡಾರಕ್ಕೆ ಬರುವ ಪ್ರವಾಸಿಗರು ಆನೆಗಳನ್ನು ಕಣ್ತುಂಬಿಕೊಳ್ಳುವುದರ ಬೋಟಿಂಗ್ ಕೂಡ ಮಾಡಲಿದ್ದಾರೆ. ಹೆಚ್ಚು ಹೊತ್ತು ಇಲ್ಲಿ ಸಮಯ ಕಳೆಯಲು ಅವಕಾಶವಾಗಲಿದೆ.
ಬಿಡಾರದ ಅಭಿವೃದ್ಧಿಗೆ 20 ಕೋಟಿ
ಇದೆ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಸಕ್ರೆಬೈಲು ಆನೆ ಬಿಡಾರದ ಅಭಿವೃದ್ಧಿಗೆ 20 ಕೋಟಿ ರೂ. ಮಂಜೂರು ಮಾಡಿದ್ದರು. ಆದರೆ ಹಲವು ತಿಂಗಳು ಕಳೆದರೂ ಕೆಲಸ ಆರಂಭವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜಿಲ್ಲೆಯ ಪ್ರವಾಸೋದ್ಯಕ್ಕೆ ಒತ್ತು
ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನೇಕ ಅವಕಾಶಗಳಿವೆ. ಹೊಸನಗರ ಕೋಟೆ, ಕವಲೇದುರ್ಗ ಕೋಟೆ, ಶಿವಮೊಗ್ಗದ ಶಿವಪ್ಪನಾಯಕ ಅರಮನೆ, ಉಡುಗಣಿಯ ಅಕ್ಕಮಹಾದೇವಿ ಜನ್ಮಸ್ಥಳ, ಜೋಗ ಜಲಪಾತದ ಅಭಿವೃದ್ಧಿ ದೃಷ್ಟಿಯಿಂದ ಕಾಮಗಾರಿಗಳು ಆರಂಭವಾಗಿವೆ. ಹೊಸನಗರದ ಕೋಟೆ ಅಭಿವೃದ್ಧಿಗೆ 1 ಕೋಟಿ ರೂ., ಕವಲೇದುರ್ಗ ಕೋಟೆ ಅಭಿವೃದ್ಧಿಗೆ 2 ಕೋಟಿ ರೂ., ಶಿವಪ್ಪನಾಯಕ ಕೋಟೆ ಅಭಿವೃದ್ಧಿಗೆ 2 ಕೋಟಿ ರೂ, ಮೀಸಲಿಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
ತ್ಯಾವರೆಕೊಪ್ಪ ಸಿಂಹಧಾಮ ಹಾಗೂ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಅನುದಾನ ಒದಗಿಸಿದೆ. ಸಕ್ರೆಬೈಲು ಹಿನ್ನೀರಿನಲ್ಲಿ ದೋಣಿ ವಿಹಾರ ಮತ್ತು ಇಲ್ಲಿನ ಪ್ರಾಕೃತಿಕ ಸೊಬಗು ಅತ್ಯಾಕರ್ಷಕವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಕೊಡಚಾದ್ರಿ ಕೇಬಲ್ ಕಾರ್
ಖಾಸಗಿ ಸಹಭಾಗಿತ್ವದಲ್ಲಿ ಕೊಲ್ಲೂರು-ಕೊಡಚಾದ್ರಿ ನಡುವೆ ಸಂಪರ್ಕ ಕಲ್ಪಿಸುವ ಕೇಬಲ್ ಕಾರ್ ಅಳವಡಿಸುವ ಒಂದು ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರೆತಿದೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಹೊಸನಗರ – ಕೊಲ್ಲೂರು ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಣೆ ಮಾಡಿದ್ದು, ಇದರ ಅಭಿವೃದ್ಧಿಗೆ 400 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. 150 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್.ಅರುಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಡಿಸಿಎಫ್ ಐ.ಎಂ.ನಾಗರಾಜ್, ಸಕ್ರೆಬೈಲು ಆನೆ ಬಿಡಾರದ ವ್ಯವಸ್ಥಾಪಕ ಎ.ಪಿ.ಕಿರಣ್, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್‌ನ ನಿರ್ದೇಶಕ ರಾಜೇಶ್ ಕಾಮತ್, ಗಾಜನೂರು ಗ್ರಾಪಂ ಅಧ್ಯಕ್ಷೆ ಜಯಶ್ರೀ, ಬಿಜೆಪಿ ಮುಖಂಡರಾದ ಎಸ್.ಎಸ್.ಜ್ಯೋತಿಪ್ರಕಾಶ್, ಬಳ್ಳೇಕೆರೆ ಸಂತೋಷ್, ಮಾಲತೇಶ್ ಇತರರಿದ್ದರು.
ಇದನ್ನೂ ಓದಿ – ಡ್ರೈವರ್’ಗೆ ಚಾಲಕನಾದ ಶಿವಮೊಗ್ಗ RTO ಅಧಿಕಾರಿ, ವಿಭಿನ್ನ ಬೀಳ್ಕೊಡುಗೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.