ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 12 OCTOBER 2024 : ಹಳ್ಳ ದಾಟುವಾಗ ಬೈಕ್ ಸಹಿತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಚ್ಚಿ ಹೋದ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಮೃತದೇಹ ಸಿಕ್ಕಿದೆ (Found).
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಡವಾಲದ ಕೊಂಡಜ್ಜಿ ಹಳ್ಳದ ಸೇತುವೆಯನ್ನು ದಾಟುವಾಗ ಚಿನ್ನಿಕಟ್ಟೆಯ ಇಕ್ಬಾಲ್ (40) ಎಂಬುವವರು ತಮ್ಮ ಬೈಕ್ ಸಹಿತ ಕೊಚ್ಚಿ ಹೋಗಿದ್ದರು. ಭಾರಿ ಮಳೆಯಿಂದಾಗಿ ಸೇತುವೆ ಮೇಲ್ಭಾಗದಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಈ ಸಂದರ್ಭ ಆಯಾತಪ್ಪಿ ಇಕ್ಬಾಲ್ ಕೊಚ್ಚಿ ಹೋಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು.
ಕೊಂಡಜ್ಜಿ ಹಳ್ಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಇಕ್ಬಾಲ್ ಅವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞರು ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್, ಎಲ್ಲೆಲ್ಲಿ ಎಷ್ಟೊತ್ತಿಗೆ ಮಳೆಯಾಗುತ್ತೆ?