ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ಅಗ್ರಹಾರದ ಬಳಿ ಇಂದು ಬೆಳಗಿನ ಜಾವ ಅಪಘಾತ (Mishap) ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ
ಖಾಸಗಿ ಬಸ್ಸಿನ ನಿರ್ವಾಹಕ ಅಣ್ಣಪ್ಪ ಮೃತರಾಗಿದ್ದಾರೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸೇರಿ ವಿವಿಧೆಡೆ ದಾಖಲು ಮಾಡಲಾಗಿದೆ.

ಉಮೇಶ್(50), ಪ್ರಸಾದ್(40), ವಿಷ್ಣು(21), ಮಂಜುನಾಥ್ (45), ಸುಜಾತಾ(40), ಅನಂದ್ ನಾಯ್ಕ್(50), ನೀಲಾಂಬಿಕಾ(45), ಪ್ರಸಾದ್ (43), ಬಿಂದು(20), ಶಶಾಂಕ್ (20), ಲಕ್ಷ್ಮೀ(35), ಶ್ರೀರಾಮುಲು(42) ಹಾಗೂ ಕಾರ್ತಿಕ್ (32) ಎಂಬುವರು ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಮಂಗಳೂರಿನಿಂದ ಚಳ್ಳಕೆರೆಗೆ ತೆರಳುತಿತ್ತು ಎಂದು ತಿಳಿದು ಬಂದಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಎಡ ಬದಿ ಸಂಪೂರ್ಣ ಹಾನಿಯಾಗಿದೆ. ಸೀಟುಗಳು ಕಿತ್ತು ಬಂದಿವೆ.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯಿಂದಾಗ ಈ ಭಾಗದಲ್ಲಿ ರಸ್ತೆ ಸಂಚಾಕ್ಕೆ ಅಡಚಣೆಯಾಗಿತ್ತು.




Mishap Near Gajanuru Agrahara in Shimoga taluk
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





