ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಬೈಕುಗಳಿಗೆ ಬಸ್ ಡಿಕ್ಕಿ, ಬೈಕ್ ಸವಾರನ ಕೈ ಮೇಲೆ ಹತ್ತಿದ ಬಸ್ ಚಕ್ರ

 ಶಿವಮೊಗ್ಗ  LIVE 

SHIVAMOGGA LIVE NEWS | 25 ಮಾರ್ಚ್ 2022

ಎದುರಿನಿಂದ ಬರುತ್ತಿದ್ದ ಎರಡು ಬೈಕುಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಒಬ್ಬನ ಕೈ ಮೇಲೆ ಬಸ್ಸಿನ ಚಕ್ರ ಹತ್ತಿದ್ದರಿಂದ ಗಂಭೀರ ಪೆಟ್ಟು ಬಿದ್ದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Sigandur-Janthre-2026-scaled.

ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಎರಡು ಬೈಕುಗಳಿಗೆ ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಹಾರೊಬೆನವಳ್ಳಿಯ ರಾಘವೇಂದ್ರ ಎಂಬುವವರ ಕೈ ಮೇಲೆ ಬಸ್ ಚಕ್ರ ಹತ್ತಿದೆ. ಇದರಿಂದ ತೀವ್ರ ಸ್ವರೂಪದ ಗಾಯವಾಗಿದೆ. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಘವೇಂದ್ರ ಚಲಾಯಿಸುತ್ತಿದ್ದ ಬೈಕಿನ ಹಿಂಬದಿಯಲ್ಲಿ ಕುಳಿತಿದ್ದ ಸೌಜನ್ಯ ಮತ್ತು ಇನ್ನೊಂದು ಬೈಕಿನಲ್ಲಿದ್ದ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರಿಗೆ ಶಿವಮೊಗ್ಗದಲ್ಲಿ ಚಿಕಿತ್ಸೆ ನೀಡಲಾಗಿದೆ.

ಖಾಸಗಿ ಬಸ್ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ 

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment