ಕೊಮ್ಮನಾಳು ಕ್ರಾಸ್‌ ಬಳಿ ಬಸ್‌, ಬೈಕ್‌ ಅಪಘಾತ, ಸವಾರ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ: ಜಿಲ್ಲೆಯ ಕೊಮ್ಮನಾಳು (Kommanalu) ತಿರುವಿನ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ (Road Accident) ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ (Nyamathi) ತಾಲೂಕಿನ ಹಳೇ ಜೋಗ ಗ್ರಾಮದ ನಿವಾಸಿ ಶಿವಕುಮಾರ್ (32) ಮೃತಪಟ್ಟ ದುರ್ದೈವಿ. ಕಳೆದ ರಾತ್ರಿ ಶಿವಮೊಗ್ಗದಿಂದ ಹಳೇ ಜೋಗದಲ್ಲಿರುವ ತಮ್ಮ ಮನೆಗೆ ಬೈಕ್‌ನಲ್ಲಿ (Motorcycle) ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Bus-Mishap-at-Kommanalu-in-shimoga

ಕೊಮ್ಮನಾಳು ತಿರುವಿನ ಸಮೀಪ ಖಾಸಗಿ ಬಸ್ (Private Bus) ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ (Head-on Collision) ರಭಸಕ್ಕೆ ಶಿವಕುಮಾರ್ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಗ್ರಾಮಾಂತರ (Shivamogga Rural) ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion