SHIVAMOGGA LIVE NEWS | 20 DECEMBER 2024
ಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ (Bus) ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕ ಮತ್ತು ಬಸ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಬಳಿ ಘಟನೆ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೆ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬಸ್ಸಿನಲ್ಲಿ 18 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ » ಭದ್ರಾವತಿ ಸ್ಪೋಟ ಕೇಸ್, ಒಬ್ಬ ಸಾವು, ಅವಶೇಷಗಳಡಿ ಮೃತದೇಹ ಪತ್ತೆ
ಅಗ್ನಿಶಾಮಕ ಸಿಬ್ಬಂದಿಗೆ ಕೂಡಲೆ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿಶಾಮಕ ಠಾಣಧಿಕಾರಿ ನರೇಂದ್ರ, ಸಿಬ್ಬಂದಿ ವಿಲ್‌ಫ್ರೆಡ್, ಲೋಹಿತ್ ಕುಮಾರ್, ಸತೀಶ್, ರಾಜೀವ್ ಸುಣಗಾರ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.