ಶಿವಮೊಗ್ಗ ವಿಮಾನ ನಿಲ್ದಾಣ, ಎಡದಂಡೆ ನಾಲೆ ನೀರಿನಿಂದ ರೈತರಿಗೆ ಸಂಕಷ್ಟ, ಅಧಿಕಾರಿಗಳು ಭೇಟಿ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಭದ್ರಾ ಎಡದಂಡೆ ಚಾನಲ್‌ (Canal) ನೀರು ಮತ್ತು ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ನೀರು ತೋಟ, ಗದ್ದೆ ಮತ್ತು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಭದ್ರಾ ಕಾಡಾ ಅಧ್ಯಕ್ಷರು ಮತ್ತು ಅಧಿಕಾರಿಗಳ ನಿಯೋಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ಮಳೆಯಾದಾಗ, ಜಲಾಶಯದಿಂದ ನೀರು ಹರಿಸಿದಾಗ ಎಡದಂಡೆ ನಾಲೆ ತುಂಬಿ ಹರಿಯುತ್ತದೆ. ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ಮಳೆ ನೀರು ಕೂಡ ನಾಲೆಗೆ ಸೇರುತ್ತದೆ. ಹಾಗಾಗಿ ಹೆಚ್ಚಿನ ಪ್ರಮಾಣದ ನೀರು ನಾಲೆಯ ಪಕ್ಕದಲ್ಲಿರುವ ತೋಟ, ಗದ್ದೆ ಮತ್ತು ತೋಟಗಳಿಗೆ ಸಂಪರ್ಕಿಸುವ ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ರೈತರಿಗೆ ತೀವ್ರ ಸಮಸ್ಯೆ ಮತ್ತು ನಷ್ಟವಾಗುತ್ತಿದೆ ಎಂದು ಆರೋಪಿಸಲಾಗಿತ್ತು.

Dr-Amshumanth-visit-near-kachinakatte

ಜಮೀನಿನಲ್ಲಿ ಮಣ್ಣು ಸವಕಳಿಯಾಗಿ ಬದು ಕುಸಿಯುತ್ತಿದೆ. ಅಡಿಕೆ ಮರಗಳ ಬುಡಗಳು ಮತ್ತು ಭತ್ತದ ಗದ್ದೆಗಳು ಮುಳುಗಡೆಯಾಗಿ ರೈತರಿಗೆ ನಷ್ಟವಾಗುತ್ತಿದೆ. ರಸ್ತೆ ಮೇಲೆ ನೀರು ಹರಿಯುತ್ತಿದೆ. ಮನೆಗಳಿಗು ನೀರು ನುಗ್ಗುತ್ತಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಭದ್ರಾ ಕಾಡಾ ಕಚೇರಿಗೆ ಅಚ್ಚುಕಟ್ಟು ರೈತರು ಮನವಿ ಸಲ್ಲಿಸಿದ್ದರು.

https://chat.whatsapp.com/JPJ0lTQsTKf365Fqu6Q7cd

ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌, ಭೂ ಅಭಿವೃದ್ಧಿ ಅಧಿಕಾರಿ ಪ್ರಶಾಂತ್.ಕೆ, ಕಾರ್ಯಪಾಲಕ ಇಂಜಿನಿಯರ್ ಜಿ.ಎಸ್.ಪಟೇಲ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರುದ್ರಸ್ವಾಮಿ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ರವಿ ಕುಮಾರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರೈತರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಯಾವ್ಯಾವ ರೈಲು ಯಾವ ಟೈಮ್‌ಗೆ ಹೊರಡಲಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 9, 2025

Leave a Comment