ಶಿವಮೊಗ್ಗ: ಭದ್ರಾ ಎಡದಂಡೆ ಚಾನಲ್ (Canal) ನೀರು ಮತ್ತು ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ನೀರು ತೋಟ, ಗದ್ದೆ ಮತ್ತು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಭದ್ರಾ ಕಾಡಾ ಅಧ್ಯಕ್ಷರು ಮತ್ತು ಅಧಿಕಾರಿಗಳ ನಿಯೋಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.
ಮಳೆಯಾದಾಗ, ಜಲಾಶಯದಿಂದ ನೀರು ಹರಿಸಿದಾಗ ಎಡದಂಡೆ ನಾಲೆ ತುಂಬಿ ಹರಿಯುತ್ತದೆ. ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ಮಳೆ ನೀರು ಕೂಡ ನಾಲೆಗೆ ಸೇರುತ್ತದೆ. ಹಾಗಾಗಿ ಹೆಚ್ಚಿನ ಪ್ರಮಾಣದ ನೀರು ನಾಲೆಯ ಪಕ್ಕದಲ್ಲಿರುವ ತೋಟ, ಗದ್ದೆ ಮತ್ತು ತೋಟಗಳಿಗೆ ಸಂಪರ್ಕಿಸುವ ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ರೈತರಿಗೆ ತೀವ್ರ ಸಮಸ್ಯೆ ಮತ್ತು ನಷ್ಟವಾಗುತ್ತಿದೆ ಎಂದು ಆರೋಪಿಸಲಾಗಿತ್ತು.
ಜಮೀನಿನಲ್ಲಿ ಮಣ್ಣು ಸವಕಳಿಯಾಗಿ ಬದು ಕುಸಿಯುತ್ತಿದೆ. ಅಡಿಕೆ ಮರಗಳ ಬುಡಗಳು ಮತ್ತು ಭತ್ತದ ಗದ್ದೆಗಳು ಮುಳುಗಡೆಯಾಗಿ ರೈತರಿಗೆ ನಷ್ಟವಾಗುತ್ತಿದೆ. ರಸ್ತೆ ಮೇಲೆ ನೀರು ಹರಿಯುತ್ತಿದೆ. ಮನೆಗಳಿಗು ನೀರು ನುಗ್ಗುತ್ತಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಭದ್ರಾ ಕಾಡಾ ಕಚೇರಿಗೆ ಅಚ್ಚುಕಟ್ಟು ರೈತರು ಮನವಿ ಸಲ್ಲಿಸಿದ್ದರು.
ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಭೂ ಅಭಿವೃದ್ಧಿ ಅಧಿಕಾರಿ ಪ್ರಶಾಂತ್.ಕೆ, ಕಾರ್ಯಪಾಲಕ ಇಂಜಿನಿಯರ್ ಜಿ.ಎಸ್.ಪಟೇಲ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರುದ್ರಸ್ವಾಮಿ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ರವಿ ಕುಮಾರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರೈತರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಯಾವ್ಯಾವ ರೈಲು ಯಾವ ಟೈಮ್‌ಗೆ ಹೊರಡಲಿದೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200