ಶಿವಮೊಗ್ಗ: ತಾಲೂಕಿನ ಉಂಬ್ಳೇಬೈಲು ಸಮೀಪದ ಮರಾಠಿ ಕ್ಯಾಂಪ್ ಬಳಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ನಿವಾಸಿ ವಿಜಯೇಂದ್ರ (45) ಮೃತ ದುರ್ದೈವಿ. ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಒಂದು ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ವಿಜಯೇಂದ್ರ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ತುಂಗಾನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
