ಶಿವಮೊಗ್ಗದ ಸಿರಿಗೆರೆ ಸಮೀಪ ಅಪಘಾತ, BSNL ನಿವೃತ್ತ ನೌಕರ ಸ್ಥಳದಲ್ಲೇ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ತಾಲೂಕಿನ ಸಿರಿಗೆರೆ ಸಮೀಪದ ಹೊಸೂರು ದರ್ಗಾ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದು, ದಾವಣಗೆರೆ ಮೂಲದ BSNL ನಿವೃತ್ತ ನೌಕರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಾವಣಗೆರೆ ಮೂಲದ ಸುರೇಶ್ (65) ಮೃತ ದುರ್ದೈವಿ. ಚಿಕಿತ್ಸೆಗಾಗಿ ಮಗ ಅಮೃತ್ (36) ಜತೆ ಮಂಗಳೂರು ಆಸ್ಪತ್ರೆಗೆ ತೆರಳಿದ್ದ ಸುರೇಶ್, ದಾವಣಗೆರೆಗೆ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿ-ಹಣಗೆರೆ-ಆಯನೂರು-ಸವಳಂಗ ಮಾರ್ಗವಾಗಿ ದಾವಣಗೆರೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿಗೆ ಅಪ್ಪಳಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಘಟನೆಯಲ್ಲಿ ಸುರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಲಾಯಿಸುತ್ತಿದ್ದ ಮಗ ಅಮೃತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-Car-Accident-Near-Sirigere-in-Shivamogga-Taluk