ಶಿವಮೊಗ್ಗ: ಚಾಲಕನನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಆರು ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ಚೋರಡಿಯ ಕುಮದ್ವತಿ ಸೇತವೆ ಬಳಿ ಘಟನೆ ನಡೆದಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಬೆಂಗಳೂರಿನಿಂದ ಆರು ಮಂದಿ ಕಾರಿನಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಕುಮುದ್ವತಿ ಸೇತುವೆ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಸೇತುವೆಗೆ ಡಿಕ್ಕಿಹೊಡೆದು ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ಆರು ಜನರಿಗೂ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.