ಶಿವಮೊಗ್ಗ ಲೈವ್
ಆಯನೂರು: ಹಣಗೆರೆಕಟ್ಟೆ ಕ್ರಾಸ್ ಬಳಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ನಲ್ಲಿದ್ದ ಮೂವರು ಯುವಕರು ಗಾಯಗೊಂಡಿದ್ದಾರೆ.
ಕೋಣಂದೂರಿನಿಂದ ಹಿಂತಿರುಗುತ್ತಿದ್ದ ವೇಳೆ ಆಯನೂರು ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಹಣಗೆರೆಕಟ್ಟೆ ಕಡೆಯಿಂದ ಬಂದ ಕಾರು ಬೈಕ್ಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ನವೀನ್ ಕುಮಾರ್, ಶೇಖ್ ಮೊಹಮ್ಮದ್, ಸೃಜನ್ ಗಾಯಗೊಂಡಿದ್ದಾರೆ. ಶೇಖ್ ಮೊಹಮ್ಮದ್ಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
