ಶಿವಮೊಗ್ಗ ಲೈವ್
ಶಿವಮೊಗ್ಗ: ಸಕ್ರೆಬೈಲು ಸಮೀಪ ಕಾರು ಮತ್ತು ಖಾಸಗಿ ಬಸ್ ಮಧ್ಯೆ ಸೋಮವಾರ ಡಿಕ್ಕಿ (collision) ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಮಾಸ್ತಿಕಟ್ಟೆ ನಿವಾಸಿಗಳಾದ ರಕ್ಕಪ್ಪಗೌಡ ಮತ್ತು ಭಾಸ್ಕರ್ ಎಂಬುವವರು ಗಾಯಗೊಂಡಿದ್ದಾರೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗದ ಕಡೆಗೆ ತೆರಳುವಾಗ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ.


ಅಪಘಾತದ ಹಿನ್ನೆಲೆ ಸಕ್ರೆಬೈಲು ಬಳಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಒಳಗೆ ರಾತ್ರಿ ತೂರಿ ಬಂತು ಪೊಟ್ಟಣ, ತೆಗೆದು ನೋಡಿದ ಸಿಬ್ಬಂದಿಗೆ ಶಾಕ್