ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 AUGUST 2023
SHIMOGA : ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ (MISHAP) ಕಾರು ಚಾಲಕ ಗಾಯಗೊಂಡಿದ್ದಾನೆ. ಸವಳಂಗ ರಸ್ತೆಯ ಮೇಲಿನ ಕುಂಚೇನಹಳ್ಳಿ (Kunchenahalli) ಬಳಿ ಘಟನೆ ಸಂಭವಿಸಿದೆ. ಅಭಿಷೇಕ್ ಎಂಬುವವರು ಶಿವಮೊಗ್ಗದಿಂದ ಸೊರಬ ತಾಲೂಕು ಉದ್ರಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಂಪ್‌ಗೆ ಬೈಕ್ ಸವಾರ ಬಲಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಕಾರಿನ ಮುಂಭಾಗ ಜಖಂ ಆಗಿದೆ. ಅಭಿಷೇಕ್ ಮೈಕೈಗೆ ನೋವಾಗಿದೆ. ಮೇಲಿನ ಕುಂಚೇನಹಳ್ಳಿ ಗ್ರಾಮಸ್ಥರು, ಸ್ನೇಹಿತನ ನೆರವಿನೊಂದಿಗೆ ಅಭಿಷೇಕ್ ಶಿವಮೊಗ್ಗಕ್ಕೆ ತಲುಪಿದ್ದು, ಮರುದಿನ ಮೆಗ್ಗಾನ್ ಆಸ್ಪತ್ರೆ ದಾಖಲಾಗಿದ್ದರು. ಖಾಸಗಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.jpeg)
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















