ಶಿವಮೊಗ್ಗ: ನೀಲಿ ಬಣ್ಣದ ಕಾರು ಡಿಕ್ಕಿಯಾಗಿ ಬೈಕಿನಲ್ಲಿದ್ದ (Bike) ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ತಾಲೂಕು ಹಸೂಡಿ ಗ್ರಾಮದ ಸರ್ಕಾರಿ ಶಾಲೆ ಬಳಿ ಘಟನೆ ಸಂಭವಿಸಿದೆ. ಬಿದರೆಯ ಆದರ್ಶ ಮತ್ತು ಗಿರೀಶ್ ಗಾಯಗೊಂಡಿದ್ದಾರೆ. ಇಬ್ಬರು ಅಡಿಕೆ ಕೂಲಿ ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ಹಸೂಡಿಗೆ ತೆರಳಿದ್ದರು. ಮಧ್ಯಾಹ್ನ ಬಿದರೆಗೆ ಮರಳುವಾಗ ವೇಗವಾಗಿ ಬಂದ ನೀಲಿ ಬಣ್ಣದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಬೈಕಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಗಿರೀಶ್ ಗಾಲಿಗೆ ಗಂಭೀರ ಗಾಯವಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಆದರ್ಶನ ಬಚಾವಾಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಪ್ರೀ ಪೇಯ್ಡ್ ಆಟೋ ಕೌಂಟರ್, ಹೇಗಿದೆ ವ್ಯವಸ್ಥೆ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






