ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ನೀಲಿ ಬಣ್ಣದ ಕಾರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ನೀಲಿ ಬಣ್ಣದ ಕಾರು ಡಿಕ್ಕಿಯಾಗಿ ಬೈಕಿನಲ್ಲಿದ್ದ (Bike) ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಶಿವಮೊಗ್ಗ ತಾಲೂಕು ಹಸೂಡಿ ಗ್ರಾಮದ ಸರ್ಕಾರಿ ಶಾಲೆ ಬಳಿ ಘಟನೆ ಸಂಭವಿಸಿದೆ. ಬಿದರೆಯ ಆದರ್ಶ ಮತ್ತು ಗಿರೀಶ್‌ ಗಾಯಗೊಂಡಿದ್ದಾರೆ. ಇಬ್ಬರು ಅಡಿಕೆ ಕೂಲಿ ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ಹಸೂಡಿಗೆ ತೆರಳಿದ್ದರು. ಮಧ್ಯಾಹ್ನ ಬಿದರೆಗೆ ಮರಳುವಾಗ ವೇಗವಾಗಿ ಬಂದ ನೀಲಿ ಬಣ್ಣದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೈಕಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಗಿರೀಶ್‌ ಗಾಲಿಗೆ ಗಂಭೀರ ಗಾಯವಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಆದರ್ಶನ ಬಚಾವಾಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಪ್ರೀ ಪೇಯ್ಡ್‌ ಆಟೋ ಕೌಂಟರ್‌, ಹೇಗಿದೆ ವ್ಯವಸ್ಥೆ?

Leave a Comment