Published On: 27 October 2025 | Monday
ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ಆಟವಾಡುತ್ತಿದ್ದ ಎರಡು ವರ್ಷದ ಮಗು (Baby) ಗಂಭೀರ ಗಾಯಗೊಂಡು ಸಾವನ್ನಪ್ಪಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ.
ಷಣ್ಮುಖ ಎಂಬುವವರ ಮಗು ವಿನಯ್ (2) ಮೃತ ದುರ್ದೈವಿ. ರಸ್ತೆಯಲ್ಲಿ ಆಟವಾಡುವಾಗ ಕೋಟೆ ಗಂಗೂರು ಕಡೆಯಿಂದ ಸಾಗರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿನಯ್ನ ಕಾಲು, ಮೈ, ಕೈಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ರಾತ್ರೋರಾತ್ರಿ ಲಾರಿ ಕದ್ದು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್