ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JULY 2024
AYANURU : ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆ (Bridge) ಪಕ್ಕದ ಹಳ್ಳಕ್ಕೆ ಹಾರಿದೆ. ಆಯನೂರು ಬಳಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕ ಗಾಯಗೊಂಡಿದ್ದಾನೆ.
ಸ್ವಿಫ್ಟ್ ಡಿಸೈರ್ ಕಾರು ಚಿತ್ರದುರ್ಗದಿಂದ ಸಾಗರದ ಕಡೆಗೆ ತೆರಳುತಿತ್ತು. ಆಯನೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಪಕ್ಕದ ಹಳ್ಳಕ್ಕೆ ಹಾರಿದೆ. ಕಾರಿನಲ್ಲಿ ಮೂವರು ಮಹಿಳೆಯರು, ಮೂವರು ಮಕ್ಕಳು ಇದ್ದರು. ಈ ಪೈಕಿ ಓರ್ವ ಮಹಿಳೆ ಮತ್ತು ಬಾಲಕನಿಗೆ ಗಂಭೀರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್, ಕಾರಣವೇನು?
LATEST NEWS
- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















