ಸಂತೆ ಕಡೂರು ಬಳಿ ಡಿವೈಡರ್‌ ಹಾರಿದ ಕಾರು, ಗಬಡಿ ಬಳಿ ಪಲ್ಟಿಯಾದ ಸ್ವಿಫ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಸೋಗಾನೆ ಸಮೀಪದ ಮೂರನೇ ಮೈಲು ಬಳಿ ರಿಟ್ಜ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರಿನ ರಸ್ತೆಗೆ ಹಾರಿದ ಘಟನೆ ನಡೆದಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದಿಂದ ಲಕ್ಕಿನಕೊಪ್ಪ ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದಿದೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್ ದಾಟಿ ಮುಂಭಾಗದ ರಸ್ತೆಗೆ ಜಿಗಿದಿದೆ. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದೆ. ಚಾಲಕ ಒಬ್ಬರೇ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತುಂಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Car-jumps-divider-at-Sogane-in-Shimoga-NR-Pura-Road.

ತೀರ್ಥಹಳ್ಳಿಯ ಗಬಡಿ ಬಳಿ ಕಾರು ಪಲ್ಟಿ

ತೀರ್ಥಹಳ್ಳಿ: ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕು ಗಬಡಿ ಬಳಿ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.