ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2023
SHIMOGA : ಚಾಲಕನ ನಿಯಂತ್ರಣ ತಪ್ಪಿದ ಕಾರು ಗಣಪತಿ ದೇವಸ್ಥಾನದ ಕಟ್ಟೆಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ. ಅದೃಷ್ಟವಾಶತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದಲ್ಲಿ ಹೆದ್ದಾರಿ ಪಕ್ಕದಲ್ಲಿರುವ ಗಣಪತಿ ದೇವಸ್ಥಾನದ ಕಟ್ಟೆಗೆ ಕಾರು ಡಿಕ್ಕಿ ಹೊಡೆದಿದೆ. ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದಾರೆ. ಕಾರಿನಲ್ಲಿ ಇಬ್ಬರು ಮಹಿಳೆ ಸೇರಿ ಮೂವರಿದ್ದರು. ಗಾಯಾಳುಗಳನ್ನು ಸ್ಥಳೀಯರೆ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಚಿಕ್ಕಮಗಳೂರು ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಚನ್ನಗಿರಿಯ ಅರಿಶಿನಘಟ್ಟಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿಗಿಳಿದ ವಕೀಲರು, ಒಂದೂವರೆ ಗಂಟೆ ರಸ್ತೆ ತಡೆ, ಆಕ್ರೋಶಕ್ಕೆ ಕಾರಣವೇನು?
ಕಾರಿನ ಮುಂಭಾಗ ಜಖಂ ಆಗಿದೆ. ದೇವಸ್ಥಾನದ ಕಟ್ಟೆಗು ಹಾನಿಯಾಗಿದೆ. ಪಿಳ್ಳಂಗಿರಿಯ ಗಣಪತಿ ದೇವಸ್ಥಾನದ ಕಟ್ಟೆ ಮೇಲೆ ನಿತ್ಯ ಶಾಲಾ ಮಕ್ಕಳು, ಗ್ರಾಮಸ್ಥರು ಬಂದು ಕೂರುತ್ತಿದ್ದರು. ಅದೃಷ್ಟವಶಾತ್ ಘಟನೆ ನಡೆದಾಗ ಯಾರು ಅಲ್ಲಿರಲಿಲ್ಲ. ಹಾಗಾಗಿ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422