ಶಿವಮೊಗ್ಗ: ಮಡಿಕೆಚೀಲೂರು ಗ್ರಾಮದಲ್ಲಿ ರಸ್ತೆ ತಡೆ (Highway) ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಸುಮಾರು 19 ಮಂದಿ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಗುಂಪು ಕಟ್ಟಿಕೊಂಡು ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜವನರಿ 15 ರಂದು ತಡರಾತ್ರಿ ಮಡಿಕೆಚೀಲೂರು ಗ್ರಾಮದ ಬಸ್ ನಿಲ್ದಾಣದ ಬಳಿ ಶಿವಮೊಗ್ಗ -ಹೊನ್ನಾಳಿ ರಾಜ್ಯ ಹೆದ್ದಾರಿಯಲ್ಲಿ ಸುಮಾರು 60-70 ಜನರು ರಸ್ತೆ ತಡೆ ನಡೆಸಿದರು. ಇದರಿಂದ ವಾಹನಗಳು ಹಾಗೂ ಆಂಬುಲೆನ್ಸ್ ಸಂಚಾರಕ್ಕೆ ತೊಂದರೆಯಾಗಿತ್ತು ಎಂದು ಆರೋಪಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮನವಿ ಮಾಡಿದರು ಪ್ರತಿಭಟನಾಕಾರರು ರಸ್ತೆ ತೆರವುಗೊಳಿಸಿರಲಿಲ್ಲ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಬಟ್ಟೆ ಅಂಗಡಿ, ಜ್ಯೂಸ್ ಸೆಂಟರ್
ಪೊಲೀಸ್ ಸಿಬ್ಬಂದಿ ಮನವಿ ಮಾಡಿದರು ಪ್ರತಿಭಟನಾಕಾರರು ರಸ್ತೆ ತೆರವುಗೊಳಿಸಿರಲಿಲ್ಲ. ಇನ್ಸ್‌ಪೆಕ್ಟರ್ ಅವರು ಹೆಚ್ಚಿನ ಸಿಬ್ಬಂದಿಯೊಂದಿಗೆ ಆಗಮಿಸಿ ಜನರಿಗೆ ಮನವರಿಕೆ ಮಾಡಿ ರಸ್ತೆಯನ್ನು ಸುಗಮಗೊಳಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





