BREAKING NEWS – ಶಿವಮೊಗ್ಗದ ಸೆಂಟ್ರಲ್‌ ಜೈಲು ಕೈದಿ ಸಾವು, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ (Central Jail) ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಮೃತ ಕೈದಿ.

ಇಂದು ಬೆಳಗಿವ ಜಾವ ಕೊನೆಯುಸಿರು

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

Shimoga-Central-Jail-Building

ಚಿಕ್ಕಮಗಳೂರಿನಲ್ಲೇ ಶಸ್ತ್ರಚಿಕಿತ್ಸೆ ಆಗಿತ್ತು

ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಕಳೆದ ಆಗಸ್ಟ್‌ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ವಾಹನಗಳ ಪಾರ್ಕಿಂಗ್‌ ನಿಷೇಧ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

Central Jail

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment