
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020
ದಾವಣಗೆರೆ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಬರುವವರ ಆರೋಗ್ಯ ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಈ ಭಾಗದಲ್ಲಿ ತಪಾಸಣೆಗೆ ಇಳಿದಿರುವ ಸಿಬ್ಬಂದಿಗೆ ಪಿಪಿಇ ಮಾದರಿಯ ಕಿಟ್ ನೀಡಲಾಗಿದೆ.
ಪಿಪಿಇ ಕಿಟ್ ಮಾದರಿಯಲ್ಲಿರುವ ಸುರಕ್ಷಿತ ಸಾಧನ ಧರಿಸಿಕೊಂಡು, ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಬರುವವರ ತಪಾಸಣೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತಿದೆ.

ಕ್ವಾರಂಟೈನ್‍ಗೆ ಇಲ್ಲಿ ಒಪ್ಪಿಗೆ, ಅಲ್ಲಿ ನಿರಾಕರಣೆ
ಹಂಚಿನ ಸಿದ್ಧಾಪುರ ಮತ್ತು ಆನವೇರಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಗ್ರಾಮಸ್ಥರ ವಿರೋಧದಿಂದಾಗಿ ಕ್ವಾರಂಟೈನ್ ವ್ಯವಸ್ಥೆಯಲ್ಲಿ ಗೊಂದಲ ನಿರ್ಮಾಣವಾಗಿತ್ತು. ಎರಡು ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿತು.

ಹಂಚಿನ ಸಿದ್ಧಾಪುರದಲ್ಲಿ ಗ್ರಾಮಸ್ಥರು ಕ್ವಾರಂಟೈನ್‍ಗೆ ಒಪ್ಪಿಗೆ ಸೂಚಿಸಿದ್ದಾರೆ. 26 ಮಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಇನ್ನು ಆನವೇರಿಯಲ್ಲಿ ಗ್ರಾಮಸ್ಥರು ಕ್ವಾರಂಟೈನ್‍ಗೆ ನಿರಾಕರಿಸಿದ್ದಾರೆ.
ತಹಶೀಲ್ದಾರ್ ಹೆಚ್.ಸಿ.ಶಿವಕುಮಾರ್, ತಾಲೂಕ ಪಂಚಾಯಿತಿ ಇಒ ತಮ್ಮಣ್ಣಗೌಡ, ಗ್ರಾಮಾಂತರ ಸಿಪಿಐ ಮಂಜುನಾಥ್ ಮತ್ತು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200