ಆನ್‌ಲೈನ್‌ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020

ಜಿಲ್ಲೆಯ ಜನತೆಯ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣದಿಂದಾಗಿ ಜಿಲ್ಲೆಯ ಹಾಗೂ ಸುತ್ತಲಿನ ಜಿಲ್ಲೆಗಳ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ದೊರೆಯುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

102840122 2933047483457936 25819849680949891 o.jpg? nc cat=109& nc sid=110474& nc ohc=ZTVF3ICldh0AX kGbxL& nc ht=scontent.fblr11 1

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಆನ್‍ಲೈನ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕ್ರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳುವ  ನಿರೀಕ್ಷೆಯಿದೆ. ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೆ ನಿಗದಿತ ಸಮಯದ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು. ಉಡಾನ್ ಯೋಜನೆಯಿಂದಾಗಿ ಜನಸಾಮಾನ್ಯರೂ ವಿಮಾನಯಾನ ಕೈಗೊಳ್ಳಬಹುದಾದ ವಾತಾವರಣವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನೀರಾವರಿ ಯೋಜನೆಗಳು, ಶಾಲೆಗಳಲ್ಲಿ ಮೂಲಭೂತ ಸೌಲಭ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಅನುಷ್ಟಾನಗೊಳಿಸಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಗೆ ವೇಗ ದೊರೆತಿದೆ. ಶಿವಮೊಗ್ಗ-ಶಿಕಾರಿಪುರ ರೈಲ್ವೇ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ನೂತನ ವಿಭಾಗ ಕಚೇರಿ ಆರಂಭಿಸಿರುವುದರಿಂದ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ವೇಗ ದೊರೆಯಲಿದೆ. ಸಿಗಂದೂರು ಬಳಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣ ಕಾರ್ಯ ಆರಂಭಿಸುವ ಮೂಲಕ ಜಿಲ್ಲೆಯ ಈ ಭಾಗದ ಜನರ ಬಹು ವರ್ಷಗಳ ಕನಸು ನನಸಾಗುತ್ತಿದೆ ಎಂದು ಹೇಳಿದರು.

ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮ. ಶಿವಮೊಗ್ಗದಲ್ಲಿ ಮುಖ್ಯ ಇಂಜಿನಿಯರ್ ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿಗಳನ್ನು ಆರಂಭಿಸುವ ಮೂಲಕ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಇನ್ನಷ್ಟು ವೇಗ ದೊರೆಯಲಿದೆ. ಗುಣಮಟ್ಟದ ಕೆಲಸ ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದರು.

ಸ್ಥಳೀಯ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿಮಾನ ನಿಲ್ದಾಣದಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕೆ ಆರಂಭವಾಗುವ ನಿರೀಕ್ಷೆಯಿದೆ. ಈ ಮೂಲಕ ಯುವ ಜನಾಂಗಕ್ಕೆ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಂಡು ಇಂದು ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

103972836 1144195652608520 2591139825880987643 n.jpg? nc cat=101& nc sid=8024bb& nc ohc=VFveV0DrH oAX9bMPbk& nc ht=scontent.fblr11 1

ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮೇಯರ್ ಸುವರ್ಣಾ ಶಂಕರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್,  ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment