ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾಲೂಕಿನ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ (collision) ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?
ಶಿವಮೊಗ್ಗದ ಬುದ್ಧನಗರದ ನಿವಾಸಿ ಪ್ರೇಮ್ ಕುಮಾರ್ (24) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಆಟೋದಲ್ಲಿದ್ದ ಮನೋಜ್ (21), ಪವನ್ (21) ಹಾಗೂ ಗಿರೀಶ್ (21) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರೇಮ್ ಕುಮಾರ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ನಾಲ್ವರು ಪ್ರಯಾಣಿಕರಿದ್ದ ಆಟೋ ಶಿವಮೊಗ್ಗದಿಂದ ಸಕ್ರೇಬೈಲು ಕಡೆಗೆ ತೆರಳುತಿತ್ತು.

ಈ ವೇಳೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














