ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ: ತಾಲೂಕಿನ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ (collision) ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

Auto-Rickshaw-and-Private-bus-Accident-at-Gajanuru

ಶಿವಮೊಗ್ಗದ ಬುದ್ಧನಗರದ ನಿವಾಸಿ ಪ್ರೇಮ್ ಕುಮಾರ್ (24) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಆಟೋದಲ್ಲಿದ್ದ ಮನೋಜ್ (21), ಪವನ್ (21) ಹಾಗೂ ಗಿರೀಶ್ (21) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರೇಮ್ ಕುಮಾರ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ನಾಲ್ವರು ಪ್ರಯಾಣಿಕರಿದ್ದ ಆಟೋ ಶಿವಮೊಗ್ಗದಿಂದ ಸಕ್ರೇಬೈಲು ಕಡೆಗೆ ತೆರಳುತಿತ್ತು.

Auto-Rickshaw-and-Private-bus-Accident-at-Gajanurucollision

ಈ ವೇಳೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment