ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | POLITICS | 9 ಏಪ್ರಿಲ್ 2022
ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂಸಿ ಠಾಣೆಗೆ ದೂರು ನೀಡಲಾಯಿತು.
ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಚಂದ್ರು ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಿ.ಟಿ. ರವಿ ಅವರು ರಾಜ್ಯದಲ್ಲಿ ಅಶಾಂತಿ ನಿರ್ಮಾಣಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಂವಿಧಾನ ವಿರೋಧಿ ಹೇಳಿಕೆ
ಗೃಹ ಸಚಿವರು ಕೋಮು ವಿಚಾರವನ್ನು ಮುಂದಿಟ್ಟುಕೊಂಡು ಸ್ಪಷ್ಟ ಮಾಹಿತಿ ಇಲ್ಲದೆ ಈ ರೀತಿ ಹೇಳಿದ್ದಾರೆ. ಇವರ ಮಾತನ್ನು ಸಿ.ಟಿ. ರವಿ ಸಮರ್ಥಿಸಿಕೊಂಡಿದ್ದಾರೆ. ಒಂದು ಹಂತದಲ್ಲಿ ಗೃಹ ಮಂತ್ರಿಗಳು ತಪ್ಪನ್ನು ಒಪ್ಪಿಕೊಂಡರೂ ಸಿ.ಟಿ. ರವಿ ಮಾತ್ರ ಮತ್ತಷ್ಟು ಪ್ರಚೋದನೆ ನೀಡುವ ಉದ್ದೇಶದಿಂದಲೇ ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇದು ಸಂವಿಧಾನ ವಿರೋಧಿಯಾಗಿದೆ. ಇಬ್ಬರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಶಿವಮೊಗ್ಗ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಸಿರಿಗೆರೆ ನಾಗರಾಜ್, ಕಾಂಗ್ರೆಸ್ ಮುಖಂಡ ಡಾ.ಶ್ರೀನಿವಾಸ್ ಕರಿಯಣ್ಣ, ಪಲ್ಲವಿ, ಸಂಜೀವಪ್ಪ, ರಾಮಣ್ಣ ಮೊದಲಾದವರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





