ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 NOVEMBER 2022
ಶಿವಮೊಗ್ಗ : ಶರಾವತಿ ಯೋಜನೆ ಸಂತ್ರಸ್ಥರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಯನೂರಿನಿಂದ ಪಾದಯಾತ್ರೆ (padayathre from ayanur) ನಡೆಸಲಾಗುತ್ತಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಪಾದಯಾತ್ರೆಗೆ ಚಾಲನೆ ನೀಡದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನಗಾರಿ ಬಾರಿಸುವ ಮೂಲಕ ಆಯನೂರಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
(padayathre from ayanur)
ದೊಡ್ಡ ಸಂಖ್ಯೆಯ ಜನ
ಪಾದಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದಾರೆ. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿರುವ ಶರಾವತಿ ಸಂತ್ರಸ್ಥರು, ಪಾದಯಾತ್ರೆ ಮಾಡುತ್ತಿದ್ದಾರೆ.
ALSO READ – ಶರಾವತಿ ಸಂತ್ರಸ್ಥರ ಸಮಸ್ಯೆ ಪರಿಹಾರಕ್ಕೆ 3 ಅವಕಾಶವಿತ್ತು, ತೀರ್ಥಹಳ್ಳಿಯಲ್ಲಿ ಸಿಎಂ
ಮಾಜಿ ಶಾಸಕ ಮಧು ಬಂಗಾರಪ್ಪ ನೇತೃತ್ವದಲ್ಲಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
(padayathre from ayanur)
ಸಂಜೆ ಬೃಹತ್ ಸಮಾವೇಶ
ಆಯನೂರಿನಿಂದ ಹೊರಟಿರುವ ಪಾದಯಾತ್ರೆ ಇಂದು ಸಂಜೆ ಶಿವಮೊಗ್ಗ ನಗರ ತಲುಪಲಿದೆ. ಬಳಿಕ ಎನ್‌ಇಎಸ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.