SHIVAMOGGA LIVE NEWS | 31 AUGUST 2023
SHIMOGA : ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ (Farmers) ಇವತ್ತು ಏರ್‌ಪೋರ್ಟ್ ಟರ್ಮಿನಲ್‌ನಲ್ಲಿ (Airport Terminal) ಸನ್ಮಾನಿಸಲಾಯಿತು. ಸಾಂಕೇತಿಕವಾಗಿ ಇಬ್ಬರನ್ನು ವೇದಿಕೆಗೆ ಆಹ್ವಾನಿಸಿ ಶಾಲು ಹೊದಿಸಿ ಗೌರವಿಸಲಾಯಿತು. ಆದರೆ ಸನ್ಮಾನಿತರು ಭೂಮಿಯನ್ನು ಕಳೆದುಕೊಂಡ ರೈತರಲ್ಲ ಎಂದು ಕಾರ್ಯಕ್ರಮದಲ್ಲಿದ್ದ ಉಳಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.
![]() |
ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ
ಟರ್ಮಿನಲ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದ ವೇಳೆ ಕೆಲಕಾಲ ಗೊಂದಲ ಸೃಷ್ಟಿಯಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಆದರೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಲ್ಲಿ ಕೃಷ್ಣಪ್ಪ ಮತ್ತು ಗೋವಿಂದರಾಜು ಎಂಬುವವರನ್ನು ಸನ್ಮಾನಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನದಲ್ಲಿ 10 ಬೆಳ್ಳಿ ಕಾಯಿನ್ ಬಹುಮಾನ, ಯಾರಿಗೆ ವಿತರಿಸಲಾಯಿತು?
ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಗರಂ
ಸನ್ಮಾನ ಸ್ವೀಕರಿಸಲು ಕೃಷ್ಣಪ್ಪ ಮತ್ತು ಗೋವಿಂದರಾಜು ವೇದಿಕೆಗೆ ಆಗಮಿಸುತ್ತಿದ್ದಂತೆ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ, ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಗರಂ ಆದರು. ಅವರು ರೈತರಲ್ಲ (Farmers), ಭೂಮಿಯನ್ನೂ ಕಳೆದುಕೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ವೇದಿಕೆ ಮೇಲೇರಿದರು. ಈ ವೇಳೆ ಪೊಲೀಸರು ವಿಜಯ್ ಕುಮಾರ್ ಅವರನ್ನು ತಡೆದರು.
ಆಕ್ರೋಶ ಹೊರ ಹಾಕಿದ ರೈತರು
ಇತ್ತ ವೇದಿಕೆಯ ಬಲ ಭಾಗದಲ್ಲಿದ್ದ ಉಳಿದ ರೈತರು ಮತ್ತು ಸ್ಥಳೀಯರು ಕೂಡ ವಿಜಯ್ ಕುಮಾರ್ ಅವರಿಗೆ ದನಿಗೂಡಿದರು. ಬಿಜೆಪಿ ಕಾರ್ಯಕರ್ತರನ್ನು ಕರೆತಂದು ರೈತರು ಎಂದ ಸನ್ಮಾನಿಸಲಾಗುತ್ತಿದೆ ಎಂದು ಸಿಟ್ಟಾದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್, ಯಾವ ಸಮಯದಿಂದ ಶುರುವಾಗುತ್ತೆ?
ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನ, ಲ್ಯಾಂಡಿಂಗ್‌ನಿಂದ ಟೇಕಾಫ್‌ವರೆಗೆ ಏನೇನಾಯ್ತು? ಇಲ್ಲಿದೆ ಪೂರ್ತಿ ಮಾಹಿತಿ
ರೈತರಿಗೆ ಭೇದವಿಲ್ಲ
ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸಂಸದ ರಾಘವೇಂದ್ರ, ರೈತರಿಗೆ ಯಾವುದೆ ಜಾತಿ, ಧರ್ಮ, ಪಕ್ಷದ ಭೇದವಿಲ್ಲ. ಎಲ್ಲರು ರೈತರೆ ಎಂದರು. ಆದರೆ ವೇದಿಕೆ ಮಂದಿದ್ದ ಉಳಿದ ರೈತರು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200