ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021
ಜಿಲ್ಲೆಯಲ್ಲಿ ಕೊರೋನ ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಹಾಗೆಂದು ಮೈಮರೆಯದೆ ಸದಾ ಎಚ್ಚರವಾಗಿದ್ದು, ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕರೋನ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಮಾತನಾಡಿದರು.
ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ಶ್ರಮಿಸುತ್ತಿದ್ದಾರೆ. ಈ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಸೋಂಕು ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ರಾಘವೇಂದ್ರ ಸೂಚಿಸಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಸೋಂಕಿನ ಗುಣಲಕ್ಷಣ ಕಂಡುಬಂದಲ್ಲಿ ಸ್ಥಳೀಯರು ಸಮೀಪದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಬೇಕು. ಈಗಾಗಲೆ ಕುಂಸಿ, ನವುಲೆ, ಗಾಜನೂರು ಮುಂತಾದ ಕಡೆ ಕೋವಿಡ್ ಕೇರ್ ಸೆಮಟರ್ ಸ್ಥಾಪಿಸಲಾಗಿದೆ. ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಬೇಕು ಎಂದು ಸಲಹೆ ನೀಡಿದರು.
ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ತಹಶೀಲ್ದಾರ್ ನಾಗರಾಜ್, ತಾಲೂಕು ವೈದ್ಯಾಧಿಕಾರಿ ಚಂದ್ರಶೇಖರ್, ಕಲ್ಲಪ್ಪ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಆರೋಗ್ಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






