ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022

ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ತಲೆ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದ್ದು ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಮೃತಪಟ್ಟಿರುವ ಸಾದ್ಯತೆ ಇದೆ.  

ಮೃತನ ಗುರುತು ಪತ್ತೆಯಾಗಿಲ್ಲ. ವಯಸ್ಸು ಸುಮಾರು 30 ರಿಂದ 35 ಎಂದು ಅಂದಾಜಿಸಲಾಗಿದೆ. ಶಿವಮೊಗ – ಕುಂಸಿ ರೈಲ್ವೆ ನಿಲ್ದಾಣಗಳ ಘಟನೆ ಸಂಭವಿಸಿದೆ. ಬೆಳಗ್ಗೆ ಮೈಸೂರು ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಚಾಲಕ ಹಳಿ ಮೇಲೆ ಮೃತದೇಹ ಇರುವುದನ್ನು ಗಮನಿಸಿದ್ದರು. ರೈಲ್ವೆ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದರು.

ಮೃತ ವ್ಯಕ್ತಿಯ ಎಡಗೈ ಮೇಲೆ FAITH +VAK3 ಎಂದ ಹಚ್ಚೆ ಇದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kalleshwara-Enterprises.webp

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa hospital

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment