ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021
ಕರೋನ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಇವತ್ತು ಆಯನೂರು ಸಂಪೂರ್ಣ ಸ್ಥಬ್ದವಾಗಿತ್ತು. ಜನ ಸಂಚಾರವಿಲ್ಲದೆ ರಸ್ತೆ ಖಾಲಿ ಖಾಲಿಯಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಠಿಣ ಲಾಕ್ ಡೌನ್ ಮಾಡಲಾಗಿದ್ದು, ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೂರು ದಿನ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ. ಹಾಗಾಗಿ ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಜನರು ಮನೆಯಿಂದ ಹೊರ ಬರುವಂತಿಲ್ಲ, ಗುಂಪುಗೂಡುವಂತಿಲ್ಲ ಎಂದು ತಿಳಿಸಲಾಗಿದೆ. ಹಾಗಾಗಿ ಆಯನೂರು ಸರ್ಕಲ್‍ನಲ್ಲಿ ಜನ ಸಂಚಾರವಿರಲಿಲ್ಲ. ಪೊಲೀಸರು ಬ್ಯಾರಿಕೇಡ್ ಹಾಕಿ, ವಾಹನಗಳ ತಪಾಸಣೆ ನಡೆಸಿದರು.
ಇದನ್ನೂ ಓದಿ | ಶಿವಮೊಗ್ಗ ತಾಲೂಕು ಕೋಹಳ್ಳಿಯಲ್ಲಿ ಮೂರು ದಿನ ನಿಷೇಧಾಜ್ಞೆ, ಏನಿರುತ್ತೆ? ಏನಿರಲ್ಲ?
ಕೋಹಳ್ಳಿ ವ್ಯಾಪ್ತಿಯಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿದೆ. ಸಾಗರ, ಹೊಸನಗರ, ತೀರ್ಥಹಳ್ಳಿ ಕಡೆಯಿಂದ ಬರುವವರಿಗೆ ಆಯನೂರು ಸರ್ಕಲ್ ಪ್ರಮುಖ ಜಂಕ್ಷನ್ ಆಗಿದೆ. ಅಲ್ಲದೆ ಯಾವಾಗಲು ಇಲ್ಲಿ ಜನ ಗುಂಪುಗೂಡುವುದರಿಂದ ಕರೋನ ಹರಡುವ ಭೀತಿ ಇದೆ. ಹಾಗಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]