ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | Crime News Today | 12 ಏಪ್ರಿಲ್ 2022
ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.
ಎಂಜಿನಿಯರ್ ಸುರೇಂದ್ರಬಾಬು ಎಂಬುವವರು ಓಡಿಸುತ್ತಿದ್ದ ಹೋಂಡಾ ಆಕ್ಟೀವಾ ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಶನಿವಾರ ಬೆಳಗಿನ ಜಾವ ರಾಮಿನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ | ‘ಕಸ್ಟಮರ್ ಕೇರ್’ಗೆ ಕರೆ ಮಾಡಿದ್ಮೇಲೆ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಬರೀ 2 ರೂ..!
ಸುರೇಂದ್ರ ಬಾಬು ಅವರು ತಾವು ಬಾಡಿಗೆಗಿದ್ದ ಕಟ್ಟಡದ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಿದ್ದರು. ಬೆಳಗಿನ ಜಾವ 3.30ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಮನೆ ಮಾಲೀಕರು ಸುರೇಂದ್ರ ಬಾಬು ಅವರಿಗೆ ಮಾಹಿತಿ ತಿಳಿಸಿದ್ದಾರೆ. ಎಲ್ಲರೂ ಸೇರಿ ಬೆಂಕಿ ಆರಿಸುವ ಹೊತ್ತಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.
ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕುರಿತು ಶಂಕೆ ಇದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಗೋಂಧಿ ಚಟ್ನಳ್ಳಿಯಲ್ಲಿ ಪೊಲೀಸರ ದಾಳಿ, ಹೊಲ, ಗದ್ದೆಗೆ ಹಾರಿ ಓಡಿದ ಆರೋಪಿ
Crime News Today
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200




